12
ಹಾಸನ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಹಾಸನ ಜಿಲ್ಲೆಯ ಇಬ್ಬರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಪ್ರಗತಿಪರ ಕೃಷಿಕರು, ಸಮಾಜ ಸೇವಕರೂ ಆಗಿರುವ ಎಂ. ಸಿ. ರಂಗಸ್ವಾಮಿ ಅವರು ರಾಜ್ಯ ಸರಕಾರದ 2025ನೇ ಸಾಲಿನ ಕೃಷಿ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ 5ದಶಕಗಳಿಂದ ನಿರಂತರವಾಗಿ ಸಮಗ್ರ ಕೃಷಿ ಕಾಯಕದಲ್ಲಿ ತೊಡಗಿಕೊಂಡಿರುವ ರಂಗಸ್ವಾಮಿ ಅವರು ಒಮ್ಮೆ ಜಿಲ್ಲಾ ಪರಿಷತ್ ಸದಸ್ಯರು ಆಗಿಯೂ ಸೇವೆ ಸಲ್ಲಿಸಿದ್ದಾರೆ. ಹಾಲಿ ಹಾಸನ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಸಾಲಿನಲ್ಲಿ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

