Home ಅಪರಾಧ ಪ್ರೇಯಸಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರೇಯಸಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಕರೆಸಿಕೊಂಡು ಹೀನಕೃತ್ಯ

by Editor

ಹಾಸನ: ಪ್ರೀತಿಸುವುದಾಗಿ ನಂಬಿಸಿ, ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕರೆಸಿಕೊಂಡು ಪ್ರೇಯಸಿಯನ್ನೇ ಅತ್ಯಾಚಾರಗೈದು ಬರ್ಬರವಾಗಿ ಹತ್ಯೆ ಮಾಡಿದ್ದ ಅಪರಾಧಿಗೆ ಹಾಸನದ 3ನೇ ಅಧಿಕ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
​​2018ರ ಏಪ್ರಿಲ್ 22 ರಂದು ಈ ಘೋರ ಕೃತ್ಯ ನಡೆದಿತ್ತು. ಬೇಲೂರು ತಾಲ್ಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ತಾಲ್ಲೂಕಿನ ಹಾಡ್ಲಗೆರೆಯ ಪ್ರವೀಣ್ (29), ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋಣ ಎಂದು ಹೇಳಿ ಯುವತಿಯನ್ನು ಕರೆಸಿಕೊಂಡಿದ್ದನು. ಹಾಸನ ತಾಲ್ಲೂಕಿನ ಕಲ್ಕೆರೆ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದನು. ಈ ಬಗ್ಗೆ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. . ಅಂದಿನ ಇನ್ಸ್ ಪೆಕ್ಟರ್ ಪಿ.ಕೆ. ರಾಜು ಪ್ರಕರಣದ  ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ​ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಏಪ್ರಿಲ್ 27 ರಂದು ಶಿಕ್ಷೆ ಪ್ರಕಟಿಸಿದೆ:
ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಎ1 ಪ್ರವೀಣನಿಗೆ  ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.  ಸಾಕ್ಷ್ಯ ನಾಶಪಡಿಸಲು ಸಹಕರಿಸಿದ ಆರೋಪದಡಿ ಎ2 ತಮ್ಮಣ್ಣಿಗೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

You may also like

Leave a Comment