Home ತಾಲೂಕುಬೇಲೂರು ಬಗರ್ ಹುಕುಂ ಹಗರಣ: ಮಾಜಿ ಶಾಸಕ ಲಿಂಗೇಶ್ ಸಿಐಡಿ ವಶಕ್ಕೆ

ಬಗರ್ ಹುಕುಂ ಹಗರಣ: ಮಾಜಿ ಶಾಸಕ ಲಿಂಗೇಶ್ ಸಿಐಡಿ ವಶಕ್ಕೆ

ಸರ್ಕಾರಿ ಜಮೀನು ಅಕ್ರಮ ಹಂಚಿಕೆ ಆರೋಪ

by Editor

ಬೇಲೂರು: ಬಗ‌ರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದ 2023ರ ಪ್ರಕರಣದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಶುಕ್ರವಾರ ಬೆಳಿಗ್ಗೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೇಲೂರು ತಾಲ್ಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅವರು ಬೇಲೂರು ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿತ್ತು.

 ಆರೋಪ

ಸುಮಾರು 2,750 ಎಕರೆ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1,430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ. 

ಈ ಸಂಬಂಧ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ (ಹಿಂದಿನ ಐಪಿಸಿ ಸೆಕ್ಷನ್ 420, 464, 465, 468, 471, 409 ಹಾಗೂ 120(ಬಿ)) ಪ್ರಕರಣ ದಾಖಲಾಗಿತ್ತು.

ಪ್ರಕರಣ ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿ, ತನಿಖೆ ಮುಂದುವರಿಸಲು ಸೂಚಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಪ್ರಕರಣ ಸಂಬಂಧ ಹಲವರನ್ನು ಸಿಒಡಿ ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ.

You may also like

Leave a Comment