5
ಅರಕಲಗೂಡು: ಪತ್ರಕರ್ತ , ಚಲನಚಿತ್ರ ನಿರ್ದೇಶಕ ಅರಕಲಗೂಡು ಸಿ.ಜಯಕುಮಾರ್ ಅವರ ತಾಯಿ ಶಾಂತಲಕ್ಷ್ಮಿ (ಪತಿ: ಚನ್ನಯ್ಯ) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಶಾಂತಲಕ್ಷ್ಮಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಗ್ಗೆ 11 ಗಂಟೆಯವರೆಗೆ ಅರಕಲಗೂಡಿನ ಮಂಜುನಾಥ ಚಿತ್ರಮಂದಿರದ ಸಮೀಪದಲ್ಲಿರುವ ಅವರ ಸ್ವಗೃಹದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ನಂತರ ಮೃತರ ಸ್ವಗ್ರಾಮವಾದ ಕಣಿಯಾರಿನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

