14
– ಅರಸೀಕೆರೆ, ಹಾಸನ ಶಾಸಕರಿಂದ ಮಾತ್ರ ಸಲ್ಲಿಕೆ
– ಅರಕಲಗೂಡು, ಹೊಳೆನರಸೀಪುರ, ಶ್ರವಣಬೆಳಗೊಳ, ಬೇಲೂರು, ಸಕಲೇಶಪುರ ಶಾಸಕರಿಂದ ಸಲ್ಲಿಕೆ ನಿಯಮ ಉಲ್ಲಂಘನೆ
ಬೆಂಗಳೂರು: ಆಸ್ತಿ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಕರ್ನಾಟಕ ಲೋಕಾಯುಕ್ತ ಪ್ರಕಟಿಸಿದೆ.
ಅದರಲ್ಲಿ ಹಾಸನ ಶಾಸಕ ಎಚ್.ಪಿ.ಸ್ವರೂಪ್, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೌಡ ಮಾತ್ರ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದ್ದಾರೆ. ಉಳಿದಂತೆ ಅರಕಲಗೂಡು ಶಾಸಕ ಎ.ಮಂಜು, ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ, ಶ್ರವಣಬೆಳಗೊಳ ಶಾಸಕ ಎಚ್.ಸಿ.ಬಾಲಕೃಷ್ಣ, ಬೇಲೂರು ಶಾಸಕ ಎಚ್.ಕೆ.ಸುರೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮತ್ತು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆಸ್ತಿ ವಿವರ ಸಲ್ಲಿಸಿಲ್ಲ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ಪ್ರತಿ ವರ್ಷ ಜೂನ್ 30ರೊಳಗೆ ಚುನಾಯಿತ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಿದೆ.




